Recent Posts

Monday, January 20, 2025
ಸುದ್ದಿ

ಪಾನಮುಕ್ತ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ, ತಾಲೂಕು ಜನಜಾಗೃತಿ ವೇದಿಕೆ ಕಾಪು, ನವಜೀವನ ಸಮಿತಿಗಳು ಕಾಪು ತಾಲೂಕು ಇವರಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾll ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾll ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕಾಪು ತಾಲೂಕಿನ ನಾರಾಯಣ ಗುರು ಬಿಲ್ಲವರ ಸಂಘ ಹೆಜಮಾಡಿಯಲ್ಲಿ ತಾಲೂಕು ಮಟ್ಟದ ಪಾನಮುಕ್ತ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ದೇವದಾಸ್ ಹೆಬ್ಬಾರ್ ರವರು ದೀಪ ಬೆಳಗಿಸಿ ನವಜೀವನ ಸಮಿತಿ ಸದಸ್ಯರಿಗೆ ಶುಭ ಹಾರೈಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಶಿವರಾಮ ಪ್ರಭು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ‌.ಸಿ ಟ್ರಸ್ಟ್ (ರಿ) ಇವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ರಾಮಚಂದ್ರ ಮತ್ತು ಶ್ರೀ ಸಂಜೀವ ಇವರು ತಮ್ಮ ನವಜೀವನ ಕುಟುಂಬದ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪಾನಮುಕ್ತರಾಗಿ ಸಾಧನೆ ಮಾಡಿದ 5 ಜನ ನವಜೀವನ ಸಮಿತಿ ಸದಸ್ಯರನ್ನು ಸನ್ಮಾನಿಸಲಾಯಿತು.

ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ ಇವರು ಮಾತನಾಡಿ ನವಜೀವನ ಸಮಿತಿಗಳ ಸಭೆ, ಸಂಘಟನೆ, ಬಲವರ್ಧನೆ, ಸ್ವಾ-ಉದ್ಯೋಗ ತರಬೇತಿ, ಕಾನ್ಫರೆನ್ಸ್ ಸಭೆಗಳು ಮತ್ತು ನವಜೀವನೋತ್ಸವ ಕಾರ್ಯಕ್ರಮದ ಮಹತ್ವ ಕುರಿತು ಮಾಹಿತಿ ನೀಡಿದರು.