ನರಿಕೊಂಬು ಗ್ರಾಮ ಪಂಚಾಯತಿನ ನರಿಕೊಂಬು ಹಾಗೂ ಶಂಬೂರು ಗ್ರಾಮದ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿಪಂ ಹಿ ಪ್ರಾ ಶಾಲೆ ನರಿಕೊಂಬು ಇಲ್ಲಿ ಗ್ರಾ ಪಂ ಅಧ್ಯಕ್ಷರಾದ ಸಂತೋಷ ಕುಮಾರ್ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು.
ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ ಕೆ ನಾಯಕ್ ಭಾಗವಹಿಸಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫನತ್ಯಾಜ್ಯ ಫಟಕ ನಿರ್ಮಾಣವಾಗದ ಬಗ್ಗೆ ಹಾಗು ಫನತ್ಯಾಜ್ಯ ವಿಲೇವಾರಿ ಸೂಕ್ತ ರೀತಿಯಲ್ಲಿ ಆಗದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡುವಂತೆ ಗ್ರಾಮಸ್ಥರು ಪ್ರಶ್ನಿಸಿದರು.
ಇದರ ಬಗ್ಗೆ ಪಂಚಾಯತ್ ಅಧ್ಯಕ್ಷರು ಉತ್ತರಿಸುತ್ತಾ ಈಗಾಗಲೇ ಸ್ದಳ ಗುರುತಿಸಿ ಫನತ್ಯಾಜ್ಯ ವಿಲೇವಾರಿಗಾಗಿ ಜಾಗ ಕಾಯ್ದಿರಿಸಲಾಗಿದೆ ಆದರೆ ಅಲ್ಲಿನ ಕೆಲವು ನಾಗರಿಕರ ವಿರೋಧ ಇರುವುದರಿಂದ ಕಾಮಗಾರಿ ಮಾಡಲು ಸಾಧ್ಯ ವಾಗುತ್ತಿಲ್ಲ ಎಂದು ತಿಳಿಸಿ ಮುಂದಿನ ದಿನಗಳಲ್ಲಿ ಫಟಕ ನಿರ್ಮಾಣ ಮಾಡಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವ ಬರವಸೆಯನ್ನು ನೀಡಿದರು.
ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ,ಗ್ರಾ ಪಂ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರು, ಆರೋಗ್ಯ ಸುರಕ್ಷಾಣಾಧಿಕಾರಿಗಳು ,ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ,ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು,ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾ ಪಂ ಸಿಬ್ಬಂದಿ ಗಳು ಹಾಜರಿದ್ದರು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಹರೀಶ್ ಕೆ ಎ ಸ್ವಾಗತಿಸಿ ವಂದಿಸಿದರು.