Sunday, January 19, 2025
ಸುದ್ದಿ

ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ. ಕಹಳೆ ನ್ಯೂಸ್

ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಈಜಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಸ್ಥಳೀಯ ಸೀರ‍್ಡ್‌ ಮತ್ತು ಡೆಲ್ಟಾ ಬೋಟಿನ ಸಿಬಂದಿ ರಕ್ಷಿಸಿದ ಘಟನೆ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು, ಮೂರು ಮಂದಿ ಯುವತಿಯರು ಸೇರಿದಂತೆ ಒಟ್ಟು ೫ ಮಂದಿ ಶನಿವಾರ ಮಧ್ಯಾಹ್ನ ಬೀಚ್‌ಗೆ ಬಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರಲ್ಲಿ ಇಬ್ಬರು ಯುವಕರು ನೀರಿಗಿಳಿದು ಈಜಲು ಮುಂದಾಗಿದ್ದರು. ಈಜುತ್ತ ಮುಂದೆ ಹೋದ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಇವರ ಗಲಾಟೆ ಕೇಳಿ ಸಮೀಪದ ವಾಟರ್‌ ಸ್ಪರ‍್ಟ್ಸ್ ಬೋಟಿನ ವಿವೇಕ್‌ ಪುತ್ರನ್‌, ರಮೇಶ್‌ ಬಂಗೇರ, ಕೃಷ್ಣ ಅವರು ತತ್‌ಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ ಎಂದು ತಿಳಿಯಲಾಗಿದೆ.