ಬೆಂಗಳೂರು: ರೈತರ ಸುಮಾರು 45 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ.
ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವ ಕುರಿತು ಮಾಹಿತಿ ಸಂಗ್ರಹ ಮಾಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದು, ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ವಿದ್ಯಾರ್ಥಿಗಳು ಮಾಡಿರುವ ಶೈಕ್ಷಣಿಕ ಸಾಲ ಮನ್ನಾ ಆಗಲಿದ್ದು. ಇದಕ್ಕಾಗಿ ಅಗತ್ಯವಿರುವ ಆಡಳಿತಾತ್ಮಕ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ.