ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್
ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ.
ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.
ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ ಬಾರಿಯೂ 23 ಗಂಟೆಯೊಳಗೆ ಸಂಪನ್ನವಾಗಿ ಮಾದರಿಯಾಗಿದೆ. ಕಂಬಳವನ್ನು ಸರಿಯಾದ ಸಮಯದಲ್ಲಿ ಮುಗಿಸಲು ಹೊಸ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ವಾಮಂಜೂರು ಕಂಬಳವು ಇತರ ಕೂಟಗಳಿಗೆ ಮಾದರಿಯಾಗಿದೆ.
ಕನೆಹಲಗೆ ವಿಭಾಗದಲ್ಲಿ ಆರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 23 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 83 ಜೊತೆ ಕೋಣಗಳು ಭಾಗವಹಿಸಿದ್ದವು.
12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ
ಕನೆಹಲಗೆ (ನೀರು ನೋಡಿ ಬಹುಮಾನ)
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ “ಬಿ”
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮೆಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ನಾರಾವಿ ಯುವರಾಜ್ ಜೈನ್
ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಕಾವೂರು ದೋಟ ಸುದರ್ಶನ್
ದ್ವಿತೀಯ: ಹರೇಕಳ ಕೈಡೇಲುಗುತ್ತು ಮಿಥುನ್ ಎಂ ರೈ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ
ಪ್ರಥಮ: ಕಾರ್ಕಳ ನೆಕ್ಲಾಜೆ ಗುತ್ತು ಪ್ರವೀಣ್ ಪ್ರದೀಪ್ ಕೋಟ್ಯಾನ್ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಕಾರ್ಕಳ ನೆಕ್ಲಾಜೆ ಗುತ್ತು ಪ್ರವೀಣ್ ಪ್ರದೀಪ್ ಕೋಟ್ಯಾನ್ “ಬಿ”
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ನೇಗಿಲು ಹಿರಿಯ
ಪ್ರಥಮ: ಮಿಜಾರು ಬರ್ಕೆ ಪ್ರವೀಣ್ ಭಂಡಾರಿ
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಾವುಂದ ಆಶ್ರಿತ ಇಶಾನಿ ವಿಶ್ವನಾಥ ಪೂಜಾರಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ನೇಗಿಲು ಕಿರಿಯ
ಪ್ರಥಮ: ವಾಮಂಜೂರು ತಿರುವೈಲು ಮಜಲುಮನೆ ಸಂಜೀವ ಮೂಲ್ಯ “ಎ”
ಓಡಿಸಿದವರು: ಹೀರೇಬೆಟ್ಟು ಹರ್ಷಿತ್
ದ್ವಿತೀಯ: ನೆಲ್ಲಿಕಾರು ಸ್ವಸ್ತಿಕ್ ಯುವ ಬಾಂಧವರು “ಎ”
ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ