Monday, March 31, 2025
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.

ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಇವರದು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಕೆ.ಟಿ.ಗಟ್ಟಿ ಅವರು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದ ಇವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅಪಾರ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ