Tuesday, January 21, 2025
ಸುದ್ದಿ

ದನದ ಮಾಂಸ ಮಾರಾಟ: ಓರ್ವನ ಬಂಧನ – ಕಹಳೆ ನ್ಯೂಸ್

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು


ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ದಾಳಿ ವೇಳೆ ಕೋಲ್ಡ್ ಸ್ಟೋರೆಜ್ ನಲ್ಲಿ ೧೦ ಕೆ.ಜಿಯಷ್ಟು ದನದ ಮಾಂಸ ಇತ್ತೆನ್ನಲಾಗಿದೆ. ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್ ಮೇಲೆ ಪ್ರಕರಣಗಳು ದಾಖಲಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು