Recent Posts

Tuesday, January 21, 2025
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲ ಹಿನ್ನೆಲೆ ; ಸರಕಾರದ ಮುಖ್ಯಕಾರ್ಯದರ್ಶಿ, ಪೋಲೀಸ್ ಮಹಾ ನಿರ್ದೇಶಕರು, ಉನ್ನತ ಅಧಿಕಾರಿಗಳಿಗೆ ನ್ಯಾಯಾಂಗ ನಿಂದನೆ ಅರ್ಜಿಯ ನೋಟೀಸ್ ಜಾರಿ – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿದ್ದ ಭಾಷಣಗಳ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿ‌ ಸಂಬಂಧಿಸಿದಂತೆ, ಹೈಕೋರ್ಟ್ ಮತ್ತೊಂದು ಮಹತ್ವದ ನಡೆಯನ್ನು ಮುಂದಿಟ್ಟಿದೆ. ಈಗಾಗಲೇ ತಿಮರೋಡಿಗೆ ನ್ಯಾಯಾಲಯದ ಅದೇಶ ಉಲ್ಲಂಘಸಿ ಭಾಷಣ ಮಾಡದಂತೆ ಎಚ್ಚರಿಕೆ ಇದ್ದರು, ನಿರಂತ ನ್ಯಾಯಾಲಯ ಅದೇಶದ ಉಲ್ಲಂಘನೆ ಮಾಡುತ್ತಿದ್ದು, ಇದನ್ನು ತಡೆಯುವಲ್ಲಿ ವಿಫಲವಾದ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಪೋಲೀಸ್ ಮಹಾನಿರ್ದೇಶಕರು ಹಾಗೂ ಇತರ ಉನ್ನತ ಅಧಿಕಾರಿಗಳಿಗ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಂಖ್ಯೆ 168/24 ರಲ್ಲಿ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

ನ್ಯಾಯಾಲಯದ ಉಲ್ಲಘಂನೆಯನ್ನು ತಡೆಯಲು ವಿಫಲವಾದ ಅಧಿಕಾರಿಗಳಿಗೆ ಈ ನೋಟೀಸ್ ಜಾರಿಯಾಗಿದ್ದು, ವಿಚಾರಣೆ ಎದುರಿಸಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ನ್ಯಾಯಮೂರ್ತಿ ಪಿ. ಎಸ್.‌ ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇ ಗೌಡ ಅವರ ಪೀಠ ಆದೇಶ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅರ್ಜಿದಾರರ ಪರ ಖ್ಯಾತ ನ್ಯಾಯವಾದಿ ರಾಜಶೇಖರ್‌ ಹಿಲ್ಯಾರ್ ವಾದಮಂಡಿಸಿದರು.