Recent Posts

Wednesday, April 23, 2025
ದಕ್ಷಿಣ ಕನ್ನಡಶಿಕ್ಷಣ

ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ ಆಚರಣೆ –ಕಹಳೆ ನ್ಯೂಸ್

ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಚಿಂತನಾ ದಿನಾಚರಣೆ ಆಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು ಮತ್ತು ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಸ್ಕೌಟ್ ಸಂಸ್ಥಾಪಕರಾದ ಲಾರ್ಡ್ ಬ್ಯಾಡನ್ ಪವೆಲರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಸ್ಕೌಟ್ ದಿನದ ಮಹತ್ವವನ್ನು ಮತ್ತು ಶಿಸ್ತಿನ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ನಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಕುಮಾರಿ ಕ್ಷಮ ನಿರೂಪಿಸಿದರು, ಕುಮಾರಿ ಧನ್ಯ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ ಹಾಗೂ ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ ಉಪಸ್ಥಿತರಿದ್ದರು. ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ