Sunday, March 30, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆನೆಮಜಲು ಅಂಗನವಾಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿ ಮಾತಾನಾಡಿದರು. ಅಂಗನವಾಡಿಯಲ್ಲಿ ದೊರೆಯುವ ಶಿಕ್ಷಣ ಮಕ್ಕಳ ಶಿಕ್ಷಣದ ಅಡಿಪಾಯವಾಗಿದೆ. ಹಿಂದಿನ ಕಾಲದಲ್ಲಿ ಮನೆಯಲ್ಲಿ ಮಕ್ಕಳಿಗೆ ತಾಯಂದಿರು ನೀಡುತ್ತಿದ್ದ ಶಿಕ್ಷಣವನ್ನು ಇಂದು ಅಂಗನವಾಡಿಯಲ್ಲಿ ಕಾರ್ಯಕರ್ತೆಯರು ನೀಡುತ್ತಿರುವ ಕಾರಣಕ್ಕಾಗಿ ಅವರು ತಾಯಿಗೆ ಸಮಾನವಾಗಿದ್ದಾರೆ. ಅಂಗನವಾಡಿಗೆ ಮಕ್ಕಳನ್ನು ದಾಖಲಿಸುವ ಮೂಲಕ ಅದನ್ನು ಬೆಳೆಸುವ ಕೆಲಸ ಆಗಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ವೇದಿಕೆಯಲ್ಲಿ ನಗರಸಭಾ ಸದಸ್ಯೆ ಗೌರಿ ಬನ್ನೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಗ್ರೇಸಿ ಗೊನ್ಸಾಲಿಸ್, ಲೋಕೋಪಯೋಗಿ ಇಂಜಿನಿಯರ್ ಕನಿಷ್ಕ, ಕಟ್ಟಡದ ದಾನಿ ಗುತ್ತಿಗೆದಾರ ಆಸಿಫ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸುಜಾತಾ ಉಪಸ್ಥಿತರಿದ್ದರು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಚಿತ್ರಿಕಾ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ದೇವಿಕಾ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ