Sunday, January 19, 2025
ಸುದ್ದಿ

ಪುತ್ತೂರು  :  ಅಕ್ಷಯ ಕಾಲೇಜುನಲ್ಲಿ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ  ಬ್ಯಾಂಕಿಂಗ್ ಹಾಗು ಇತರಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ – ಕಹಳೆ ನ್ಯೂಸ್

ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ಇದರ ವತಿಯಿಂದ ದ್ವಿತೀಯ ಮತ್ತು ತ್ರಿತೀಯ ಪದವಿವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸ್ಮಾರ್ಟ್ ಕ್ಲಾಸ್ಸಸ್ ಅಕಾಡೆಮಿ ಇದರ ತರಬೇತುದಾರರಾದಡಾ.ಸರಸ್ವತಿಯವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಹಾಗು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸವಾಲುಗಳು ಮತ್ತು ಅದರತಯಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿತೀಯ ಬಿ.ಕಾಂ ವಿದ್ಯಾರ್ಥಿನಿ ಕು.ಸಾಕ್ಷಿ ಸ್ವಾಗತಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ
ಕು.ಅಂಜಲಿ ವಂದಿಸಿದರು. ಹಾಗು ಕಾಲೇಜಿನ ಉಪನ್ಯಾಸಕರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.