Recent Posts

Monday, April 14, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

(ಫೆ.29) ಇಂದು ಪುತ್ತಿಲ ಪರಿವಾರದ ಪತ್ರಿಕಾಗೋಷ್ಠಿ ; ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ – ಕಹಳೆ ನ್ಯೂಸ್

ಪುತ್ತೂರು : ಲೋಕಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ತೀವ್ರಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯು ಬಂಡಾಯದ ಬಿಸಿಯ ಕಾವು ಜೋರಾಗಲಿದೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ಇಂದು (ಫೆ.29) ಮಧ್ಯಾಹ್ನ 12 ಗಂಟೆಗೆ ಮುಕ್ರಂಪಾಡಿಯ ಪುತ್ತಿಲ ಪರಿವಾರದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.ಲೋಕಸಭಾ ಚುನಾವಣಾ ಹಿನ್ನೆಲೆ ಈ ಪತ್ರಿಕಾಗೋಷ್ಠಿ ಬಹಳ ಮಹತ್ವದ್ದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲೋಕಸಭೆ ಚುನಾವಣೆಯ ಬಗ್ಗೆ ತಮ್ಮ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಕರೆಯಲಾಗಿದೆ ಎನ್ನಲಾಗುತ್ತಿದ್ದು, ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರುತ್ತಾರ..!? ಅಥವಾ ಮತ್ತೆ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿದ್ದು, ಇದೀಗ ಎಲ್ಲರ ಚಿತ್ತ ಮಧ್ಯಾಹ್ನದ ಪತ್ರಿಕಾಗೋಷ್ಠಿಯತ್ತ ತಿರುಗಿದೆ.

ರಾಜಕೀಯ ವಲಯದಲ್ಲಿ ಯಾವ ರೀತಿ ಸಂಚಲನವಾಗಲಿದೆ ಎಂದು ಕಾದು ನೋಡಬೇಕಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ