
ಮಂಗಳೂರು: ಜಿಲ್ಲೆಯಾದ್ಯಂತ ಮಾ.3 ರಂದು ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ- 5 ವರ್ಷದೊಳಗಿನ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.