ಲೋಕಸಭಾ ಚುನಾವಣೆಯ ಹಿನ್ನೆಲೆ ; ರೌಡಿ ಶೀಟರ್ಗಳು ಇತರ ಆಸಾಮಿಗಳ ಮನೆಗಳಿಗೆ, ಠಾಣಾಧಿಕಾರಿಗಳು ಧಿಢೀರ್ ಭೇಟಿ – ಕಹಳೆ ನ್ಯೂಸ್
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆಸಾಮಿಗಳ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ದಿನಾಂಕ 29ರ ರಾತ್ರಿ, ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಸದ್ರಿ ಆಸಾಮಿಗಳಿಗೆ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.