Sunday, January 19, 2025
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ – ಕಹಳೆ ನ್ಯೂಸ್

ಕಡಬ  : ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿಬಿ,ಅರ್ಚನಾ ಮತ್ತು ಅಮೃತಾ ಮೇಲೆ ಆ್ಯಸಿಡ್ ದಾಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿರಿವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.