Saturday, November 23, 2024
ಜಿಲ್ಲೆಸುದ್ದಿ

ಮಂಗಳೂರು : ಕಡಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ಯುವಕರು ಸಮುದ್ರಪಾಲು – ಕಹಳೆ ನ್ಯೂಸ್

ಮಂಗಳೂರು : ತೂಫಾನ್ ರೀತಿಯ ಬಲವಾದ ಗಾಳಿಯಿಂದ ಪ್ರಕ್ಷುಬ್ಧಗೊಂಡಿದ್ದ ಕಡಲ ಅಲೆಗಳ ಹೊಡೆತಕ್ಕೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಹಿತ ಮೂವರು ಯುವಕರು ಸಮುದ್ರಪಾಲಾದ ಘಟನೆ ಪಣಂಬೂರಿನಲ್ಲಿ ನಡೆದಿದೆ.


ಕೈಕಂಬ ರೋಸಾ ಮಿಸ್ತಿಕಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಿಖಿತ್ (18), ಖಾಸಗಿ ಸಂಸ್ಥೆಯೊoದರಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್ (20) ಹಾಗೂ ಬೈಕಂಪಾಡಿ ಮುಂಗಾರು ಜಂಕ್ಷನ್‌ನಲ್ಲಿರುವ ಎಂಎAಆರ್ ಕಂಪೆನಿಯಲ್ಲಿ ಮೇಲ್ವಿಚಾರಕರಾಗಿದ್ದ ನಾಗರಾಜ್ (24) ನೀರುಪಾಲಾದವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ನೇಹಿತರಾಗಿದ್ದ ಯುವಕರು ರಜಾ ದಿನವಾದ ಕಾರಣ ರವಿವಾರ ವಿಹಾರಕ್ಕೆಂದು ಪಣಂಬೂರು ಬೀಚ್‌ಗೆ ಬಂದಿದ್ದರು. ಸಂಜೆ ನೀರಿನಲ್ಲಿ ಆಟವಾಡುತ್ತಿದ್ದಾಗ ಬೃಹತ್ ಗಾತ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೆuಟಿಜeಜಿiಟಿeಜಚ್ಚಿ ಹೋಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಪಣoಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮುದ್ರಪಾಲಾಗಿರುವ ಮೂವರು ಸೇರಿದಂತೆ ಒಟ್ಟು ಐದು ಮಂದಿ ಜೊತೆಯಾಗಿ ಪಣಂಬೂರು ಬೀಚ್‌ಗೆತೆರಳಿದ್ದರು ಎನ್ನಲಾಗಿದೆ. ಇವರೆಲ್ಲರೂ ಅಂಬೇಡ್ಕರ್ ಕಾಲನಿ ನಿವಾಸಿಗಳಾಗಿದ್ದಾರೆ.