Sunday, January 19, 2025
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗೆ ಕಡಬ ಕಾಲೇಜಿನ ಸಮವಸ್ತ್ರ ಹೇಗೆ ಸಿಕ್ಕಿತು ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ನಂದನ್ ಮಲ್ಯ ಆಗ್ರಹಿಸಿದ್ದಾರೆ.
ಆ್ಯಸಿಡ್ ದಾಳಿಗೊಳಗಾಗಿರುವ ವಿದ್ಯಾರ್ಥಿನಿಯರಿಗೆ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು