Sunday, January 19, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಕಡಬ :ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ : ಪುತ್ತೂರಿನ ವಿವೇಕಾನಂದ ಕಾಲೇಜು ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ರಾಮಕುಂಜ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿAದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ , ತಾಯಿ, ಸಹೋದರರಾದ ಸುನೀಶ್ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.