Friday, November 15, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಹಾಶಿವರಾತ್ರಿ ಸಂಭ್ರಮಕ್ಕೆ ಸಜ್ಜಾದ ಶ್ರೀ ಕ್ಷೇತ್ರ ಧರ್ಮಸ್ಥಳ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾಶಿವರಾತ್ರಿ ಸಂಭ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಜ್ಜಾಗಿದೆ. ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.


ರಾಜ್ಯದ ನಾನಾ ಕಡೆಯಿಂದ ಬರುವ ಪಾದಯಾತ್ರಿಗಳ ಸ್ವಾಗತಕ್ಕೆ ಚಾರ್ಮಾಡಿ ಪ್ರದೇಶದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಪಾದಯಾತ್ರಿಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ದಾರಿಯುದ್ದಕ್ಕೂ ಕಸದ ಬುಟ್ಟಿ , ಗೋಣಿ ಚೀಲಗಳನ್ನು ಇರಿಸಿ ಕಸ ಹಾಕುವಂತೆ ವ್ಯವಸ್ಥೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಅರಣ್ಯ ಇಲಾಖೆಯು ಘಾಟಿ ಪರಿಸರದ ರಸ್ತೆ ಬದಿಯ ತ್ಯಾಜ್ಯವನ್ನು ತೆರವುಗೊಳಿಸಿ ಸುಗಮವಾಗಿ ಸಾಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಪಾದಯಾತ್ರಿಗಳು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅರಣ್ಯ ಇಲಾಖೆಯಿಂದ ಪಾದಯಾತ್ರೆ ಮೂಲಕ ಆಗಮಿಸುವ ಭಕ್ತರಿಗೆ ಪಂಜ, ಸುಬ್ರಮಣ್ಯ, ಬೆಳ್ತಂಗಡಿ, ಉಪ್ಪಿನಂಗಡಿ ಅರಣ್ಯ ಇಲಾಖೆ ವಲಯಗಳ ಮೂಲಕ ಕುಡಿಯುವ ನೀರು, ತಂಗಲು ತಾತ್ಕಾಲಿಕ ಶೆಡ್ ವ್ಯವಸ್ಥೆ , ಕಸವಿಲೇವಾರಿಗೆ ಕಸದ ಬುಟ್ಟಿಗಳನ್ನು ಇರಿಸಲಾಗುವುದು ಎಂದು ಜಿಲ್ಲಾ ಡಿ.ಎಫ್. ಒ ಆಂಟನಿ ಮರಿಯಪ್ಪ ತಿಳಿಸಿದ್ದಾರೆ.