ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.