Recent Posts

Wednesday, April 23, 2025
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‍ಐಎ ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

ಬಾಂಬರ್ ನ ಫೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರೂಕ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್‍ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ