ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ಹಾಗೂ ಕಾಪು ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ನಿವೇಶನ ಹಕ್ಕುಪತ್ರವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 05 ರಂದು ಕಾಪು ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಸುಮಾರು 40 ಕ್ಕೂ ಅಧಿಕ ವರ್ಷಗಳಿಂದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರುವ 4 ಫಲಾನುಭವಿಗಳಿಗೆ ಹಾಗೂ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಫಲಾನುಭವಿಗಳಿಗೆ ಮತ್ತು ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಫಲಾನುಭವಿಗಳಿಗೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ 2 ಫಲಾನುಭವಿಗಳಿಗೆ ಸೇರಿದಂತೆ ಒಟ್ಟು 8 ಫಲಾನುಭವಿಗೆ 94/C ಹಾಗೂ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಡಾ ಪ್ರತೀಭಾ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಸದಸ್ಯರಾದ ಸಚಿನ್ ಹಾಗೂ ಗ್ರಾಮ ಆಡಳಿತಾಧಿಕಾರಿ ಉಪಸ್ಥಿತರಿದ್ದರು