ಭಾರತದ ಕ್ರಿಕೆಟ್ ಲೋಕದಲ್ಲಿ ಪುರುಷರೇ ಅಂಪೈರ್‌ಗಳಾಗೋದು ಮಾತು. ಆದ್ರೆ ಈ ಮಾತನ್ನು ಈಗ ಹೇಳುವಂತಿಲ್ಲ ಯಾಕೆಂದ್ರೆ ಮುಂಬೈನ ವೃಂದಾ ರತಿ ಭಾರತದ ಮೊದಲ ಮಹಿಳಾ ಅಂಪೈರ್‌ಗಳಲ್ಲಿ ಒಬ್ಬರು ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ.
29 ವರ್ಷದ ವೃಂದಾ ರತಿ ಬಿಸಿಸಿಐನ ಎರಡನೆಯ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ.
2013 ರ ಮಹಿಳಾ ವಿಶ್ವಕಪ್‌ನಲ್ಲಿ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದ್ದ ವೃಂದಾ, ಮುಂಬೈ ಕ್ರಿಕೆಟ್ ಸಂಸ್ಥೆಯಲ್ಲಿ 2013 ರಿಂದ ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ವೃಂದಾ, ಮಹಿಳಾ ಕ್ರಿಕೆಟ್ ಪಂದ್ಯಗಳು ಮತ್ತು ಕಿರಿಯರ ಕ್ರಿಕೆಟ್ ಪಂದ್ಯಗಳ ಅಂಪೈರ್ ಆಗಿ ಕಾರ್ಯನಿರ್ವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ. ಇದು ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಮಹಿಳಾ ಯುಗದ ಆರಂಭ ಎಂದು ಕ್ರಿಕೆಟ್ ಪ್ರೇಮಿಗಳು ಸ್ವಾಗತಿಸಿದ್ದಾರೆ.