ಬೆಳಾಲು: ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಬೆಳಾಲು, ನಾಗಾಂಬಿಕ ಸಂಜೀವಿನಿ ಒಕ್ಕೂಟ ರಿ. ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳೆಯರಿಗಾಗಿ ವಿಶೇಷವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಬೆಳಾಲು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ವಹಿಸಿದ್ದರು. ಮಹಿಳೆಯರು ಸ್ವವಾಲಂಬಿ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಗಳಿಸಬೇಕೆಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಮಧುರ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಪುಸ್ತಕ ಬರಹಗಾರರಾದ ಹರಿಣಾಕ್ಷಿ ಒಕ್ಕೂಟದ ವರದಿಯನ್ನು ಮಂಡಿಸಿದರು.
ಸರಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಯಾವ ರೀತಿ ಬಳಸಿಕೊಳ್ಳಬೇಕೆಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಷಾ ಕಾಮತ್ ತಿಳಿಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ, ಎನ್ ಆರ್ ಎಲ್ ಎಂ ಯೋಜನೆಯ ಬಗ್ಗೆ ಹಾಗೂ ಸಂಘಗಳಿಗೆ ಸೇರಿ ಮಹಿಳೆಯರು ಬೇರೆ ಬೇರೆ ಕಾರ್ಯಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿರುವ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಮೇಲ್ವಿಚಾರಕಿಯಾದ ಅನ್ನಪೂರ್ಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸ್ತ್ರೀಶಕ್ತಿ ಹಾಗೂ ಸಂಜೀವಿನಿ ಸಂಘಗಳಲ್ಲಿ ಹೆಚ್ಚು ಸಾಧನೆ ಮಾಡಿದ ಸಂಘದ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಮಹಿಳೆಯರಿಗೆ ವಿವಿಧ ಮನೋರಂಜನ ಆಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಾಧ್ಯಕ್ಷೆ ಗೀತಾ, ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಬಾಯಿ, ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಗೊಂಚಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಬ್ಲಾಕ್ ಸೊಸೈಟಿ ಅಧ್ಯಕ್ಷೆ ನಿಶಾ, ಎಂ ಬಿ ಕೆ ಹರಿಣಾಕ್ಷಿ , ಎಲ್ ಸಿ ಆರ್ ಪಿ ವಾಣಿ, ಸರಸ್ವತಿ, ಪಶುಸಖಿ ಯಶೋಧ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಸದಸ್ಯರು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿ ಲತಾ, ವಿದ್ಯಾ ಭಟ್, ಆಶಾ ಇವರ ಪ್ರಾರ್ಥಿಸಿ, ಕೃಷಿಸಖಿ ಸ್ವಾತಿ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಸರಸ್ವತಿ ಧನ್ಯವಾದ ನೀಡಿದರು.