Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಮೂಡಬಿದಿರೆಸುದ್ದಿ

ಬಂಟ್ವಾಳ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಪ್ರಾಣಾಪಾಯದಿಂದ ಪಾರಾದ ಬಸ್ ಪ್ರಯಾಣಿಕರು – ಕಹಳೆ ನ್ಯೂಸ್

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ