ಬೆಂಗಳೂರು: ಸುನಾಮಿ ಅಲೆ ಎಬ್ಬಿಸಿರುವ ಮೀ ಟೂ ಲೈಂಗಿಕ ಕಿರುಕುಳ ಪ್ರಕರಣಗಳು ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಲೈಂಗಿಕ ದುರ್ವರ್ತನೆ ಮತ್ತು ಹಲ್ಲೆ ಆರೋಪಗಳ ಆಧಾರದ ಮೇಲೆ ಎಫ್‌ಐಆರ್‌ಗಳನ್ನು ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ಕುರಿತು ಹಿರಿಯ ವಕೀಲ ಎಂ.ಎಲ್.ಶರ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತಳ್ಳಿ ಹಾಕಿದೆ.
ಇಂಥ ಪ್ರಕರಣಗಳ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ. ಕ್ರಮಬದ್ಧವಾಗಿ ಇದು ವಿಚಾರಣೆಗೆ ಒಳಪಡುತ್ತವೆ ಎಂದು ಪೀಠವು ಸ್ಪಷ್ಟಪಡಿಸಿದೆ.