Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಭ್ರಮದಲ್ಲಿ ಶಿವ-ಪಾರ್ವತಿ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ, ಜಾತ್ರೋತ್ಸವ ಪ್ರಯಕ್ತ ವಿಶೇಷ ಕಾರ್ಯಕ್ರಮವಾದ ಶ್ರೀ ಪಾರ್ವತಿ, ಪರಮೇಶ್ವರರ ಭೇಟಿ ನಡೆಯಿತು.

ಕ್ಷೇತ್ರದ ತಂತ್ರಿ ವರ್ಕಾಡಿ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕರಾದ ಮಿಥುನ್ ರಾಜ್ ನಾವಡ ಮತ್ತು ಜಯಶಂಕರ ಉಪಾಧ್ಯಾಯ ಅವರ ಸಹಕಾರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಾ.8ರಂದು ಕಾರಿಂಜೇಶ್ವರ ಸನ್ನಿಧಿಯಲ್ಲಿ ತುಲಾಭಾರ ಸೇವೆ, ಏಕಾದಶ ರುದ್ರಾಭಿμÉೀಕ, ರಂಗಪೂಜೆ ನಡೆಯಿತು. ಸಾವಿರಾರು ಭಕ್ತರು ಮಹಾಶಿವರಾತ್ರಿ ಜಾಗರಣೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ರಾತ್ರಿ ಯಕ್ಷಗಾನ ಬಯಲಾಟ ನಡೆಯಿತು.

ಮಾ.9ರಂದು ರಾತ್ರಿ ಬಲ್ಲೋಡಿ ಮಾಗಣೆ ಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿತು. ಸಂಜೆ ಭರತನಾಟ್ಯ, ಯಕ್ಷರೂಪಕ ನಡೆಯಿತು. ರಾತ್ರಿ ಜಾತ್ರೋತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಪಾರ್ವತಿ-ಪರಮೇಶ್ವರ ದೇವರ ಭೇಟಿ ನಡೆಯಿತು. ಬಳಿಕ ಚಂದ್ರ ಮಂಡಲ ಉತ್ಸವ, ಬೆಳಗ್ಗೆ ಶಯನೋತ್ಸವ ಕವಾಟ ಬಂಧನ, ಪ್ರಸಾದ ವಿತರಣೆ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ,ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಬಂಟ್ವಾಳ ಡಿವೈಎಸ್‍ಪಿ ವಿಜಯೇಂದ್ರ ಪ್ರಸಾದ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು,ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಗ್ರಾಮಣಿಗಳಾದ ಗಣಪತಿ ಮುಚ್ಚಿನ್ನಾಯ, ವೆಂಕಟರಮಣ ಮುಚ್ಚಿನ್ನಾಯ, ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷ ಅಜಿತ್ ಶೆಟ್ಟಿ, ಕಾವಳಪಡೂರು ಗ್ರಾ.ಪಂ. ಅಧ್ಯಕ್ಷ ಲಕ್ಷ್ಮಿ ನಾರಾಯಣ ಶರ್ಮ, ವ್ಯವಸ್ಥಾಪನ ಸಮಿತಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಮತ್ತಿತರರು ಭಾಗವಹಿಸಿದ್ದರು.