Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಮಲಗಿದ್ದಲ್ಲೆ ಹೃದಯಾಘಾತಕ್ಕೆ ಬಲಿಯಾದ ಅವಿವಾಹಿತ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11ರಂದು ನಡೆದಿದೆ.

ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ,ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಿಗ್ಗೆ ಉದಯ ಎದ್ದ ಹೇಳಲಿಲ್ಲ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಆತ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೋಲೀಸರು ಬೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು