Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ : ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರ ವಿಶೇಷ ತಂಡ – ಕಹಳೆ ನ್ಯೂಸ್

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಆರೋಪಿಗಳಾದ ರಫೀಕ್ ಯಾನೆ ಗೂಡಿನ ಬಳಿ ರಫೀಕ್ , ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್ ಹಾಗೂ ಬಾಯಾರು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಫೆಬ್ರವರಿ 7 ರಂದು ರಾತ್ರಿ ಬ್ಯಾಂಕ್ ಕಟ್ಟಡದ ಹಿಂಬದಿ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಖದೀಮರು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಹಾಗೂ ಹದಿನಾರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಣ ದರೋಡೆಗೈದಿದ್ದರು.

ಒಟ್ಟು ಈ ಪ್ರಕರಣದಲ್ಲಿ ಐವರು ಆರೋಪಿಗಳಿದ್ದು 3 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದೇ ತಂಡ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ಕಳ್ಳತನ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದರು.

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳ್ಳತನ ಮಾಡಿದ ಈ ತಂಡ ಹಿಂದಿನ ದಿನ ಬಂದು ಸಂಚು ರೂಪಿಸಿರುತ್ತಾರೆ.ಮರುದಿನ ಬಂದ ಐವರ ತಂಡದಲ್ಲಿ 4 ಜನ ಬ್ಯಾಂಕಿನ ಕಿಟಕಿ ಮುರಿದು ಒಳ ನುಗ್ಗಿ ಕೃತ್ಯ ಎಸಗಿದ್ದಾರೆ. ಒಬ್ಬ ಹೊರಗಡೆಯಿಂದ ಸುಳಿವು ನೀಡುತ್ತಿದ್ದ ಎನ್ನಲಾಗಿದೆ.

ಬಂಧಿಸಿದ ಪ್ರಮುಖ ಆರೋಪಿಗಳಲ್ಲಿ ರಫೀಕ್ ಯಾನೆ ಗೂಡಿನ ಬಳಿ ರಫೀಕ್ ಈತನ ಮೇಲೆ ದರೋಡೆ, ಕಳ್ಳತನದ ಹಲವಾರು ಪ್ರಕರಣಗಳಿವೆ.ಖಲಂದರ್ ಎಂಬಾತನ ಮೇಲೆ ಕಣ್ನೂರು,ಪುತ್ತೂರು,ವಿಟ್ಲ,ಸಂಪ್ಯ ಠಾಣೆಗಳಲ್ಲಿ ಈ ಹಿಂದೆ ಅನೇಕ ಕಳ್ಳತನ ಪ್ರಕರಣಗಳಿವೆ.ಬಾಯಾರು ನಿವಾಸಿ ದಯಾನಂದ ಎಂಬವನು ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಈತ ಹಣದ ಆಸೆಗೊಸ್ಕರ ಇದೇ ಮೊದಲ ಬಾರಿ ಈ ಖರ್ತನಾಕ್ ತಂಡದೊAದಿಗೆ ಸೇರಿಕೊಂಡು ಸ್ಟ್ರಾಂಗ್ ರೂಮಿನ ಭಾರಿ ಭದ್ರತೆಯ ಕಬ್ಬಿಣದ ಬಾಗಿಲನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡರಿಸುವಲ್ಲಿ ಈತನ ಪ್ರಮುಖ ಪಾತ್ರವಿದೆ.

ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ನೇತೃತ್ವದಲ್ಲಿ ಬೇರೆ ಬೇರೆ ವಿಶೇಷ ತಂಡಗಳನ್ನು ರಚಿಸಿ ಈ ಪ್ರಕರಣವನ್ನು ಬೇಧೀಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.