Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಕಡಬ : ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು – ಕಹಳೆ ನ್ಯೂಸ್

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬoಧಿಸಿದoತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು