Monday, January 20, 2025
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಸಣ್ಣಕುಕ್ಕು, ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪು ಸಣ್ಣಕುಕ್ಕು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನೂತನ ಕಟ್ಟಡ ಉದ್ಘಾಟನೆ : ಸಾಧಕರಿಗೆ ಅಭಿನಂದನೆ , ಚಿಣ್ಣರ ಸಂಭ್ರಮ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

 ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಸಣ್ಣಕುಕ್ಕು, ಪೋಷಕರು ಮತ್ತು ಸ್ತ್ರೀ ಶಕ್ತಿ ಗುಂಪು ಸಣ್ಣಕುಕ್ಕು ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಕಟ್ಟಡ ಉದ್ಘಾಟನೆ – ಸಾಧಕರಿಗೆ ಅಭಿನಂದನೆ ,ಚಿಣ್ಣರ ಸಂಭ್ರಮ – ಮಹಿಳಾ ದಿನಾಚರಣೆ ಕಾರ್ಯಕ್ರಮ ಸಣ್ಣಕುಕ್ಕುವಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ, ಸಣ್ಣಕುಕ್ಕು ಅಂಗನವಾಡಿ ಕೇಂದ್ರ ಮಾದರಿ ಕೇಂದ್ರವಾಗಿ ಮೂಡಿಬರಲಿ, ಅಂಗನವಾಡಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಹಾಗೂ ಕಾಂಪೌAಡ್ ನಿರ್ಮಾಣಕ್ಕೆ ಶಾಸಕ ನಿಧಿಯಿಂದ ನೀಡುವುದಾಗಿ ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಒಳಗೊಂಡ ಉತ್ತಮ ಶಿಕ್ಷಣ ನೀಡಿರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿ.ಪಂ.ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್, ತಾ.ಪಂ.ಮಾಜಿ ಸದಸ್ಯ ದಿನೇಶ್ ಅಮ್ಟೂರು, ಬಾಳ್ತಿಲ ಗ್ರಾ.ಪಂ.ಉಪಾಧ್ಯಕ್ಷೆ ರಂಜಿನಿ, ಸದಸ್ಯರಾದ ಕು.ಹಿರಣ್ಮಯಿ, ಮಮತಾ,ಚಂದ್ರಶೇಖರ, ಬಾಲವಿಕಾಶ ಸಮಿತಿ ಅಧ್ಯಕ್ಷೆ ರಾಜೇಶ್ವರಿ, ಮೇಲ್ವಿಚಾರಕಿ ಲೀಲಾವತಿ, ಬಾಳ್ತಿಲ ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶ್ರೀ , ಶ್ರೀ ಕುಂದಾಯ ಮಹಾಮ್ಮಾಯಿ ರಕ್ತೇಶ್ವರಿ ಸೇವಾಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶರತ್ ಕುಮಾರ್,ನಂದಾ ದೀಪ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್, ನಿವೃತ್ತ ಸಿ.ಡಿ.ಪಿ.ಒ ಗಾಯತ್ರಿ ಕಂಬಳಿ, ಬಾಳ್ತಿಲ ಅರೋಗ್ಯ ಕೇಂದ್ರದ ಸಹಾಯಕಿ ಸರಸ್ವತಿ, ಪ್ರಮುಖರಾದ ಮೋಹನ್ ಪಿಎಸ್.ಆನಂದ ಶಂಭೂರು, ಅಬ್ದುಲ್ ರಜಾಕ್,ಸಿಡಿಪಿಒ ಶೀಲಾವತಿ, ಸ್ಥಳದಾನಿ ವಾಸುದೇವ ಮಯ್ಯ , ಉದ್ಯಮಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರದ ನಿರ್ಮಾಣಕ್ಕೆ ಕಾರಣರಾದವರನ್ನು ಮತ್ತು ನಿವೃತ್ತರಾದ ಬಂಟ್ವಾಳ ಸಿಡಿಪಿಒ ಗಾಯತ್ರಿ ಕಂಬಳಿ ಅವರನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ನಡೆಸಲಾಗಿದ್ದ ವಿವಿಧ ಅಟೋಟಸ್ಪರ್ಧೆಯಲ್ಲಿ ವಿಜೇತರಾದ ಅಂಗನವಾಡಿ ಪುಟಾಣಿಗಳನ್ನು ಹಾಗೂ ಪೋಷಕರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಮಮತಾ ಸ್ವಾಗತಿಸಿ, ವಿನುತಾ ವಂದಿಸಿದರು. ಕು.ಪ್ರಶಂಸಾ ಮತ್ತು ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು.