Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೆÇೀಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.