Sunday, January 19, 2025
ದಕ್ಷಿಣ ಕನ್ನಡಮಂಗಳೂರುಸುದ್ದಿ

70ಲಕ್ಷ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ನಿರ್ಮಾಣಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ 70ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ಶ್ರೀ ಕ್ಷೇತ್ರವು ಜಿಲ್ಲೆ ಮಾತ್ರವಲ್ಲದೇ ನಾಡಿನ ಪ್ರಮುಖ ದೇವಸ್ಥಾನಗಳಲ್ಲೊಂದಾಗಿದೆ. ಪ್ರತಿನಿತ್ಯ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡುತ್ತಲಿದ್ದು ದಸರಾ ಸಂದರ್ಭದಲ್ಲಂತೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇಂತಹ ಕ್ಷೇತ್ರಕ್ಕೆ ಉತ್ತಮ ಮೂಲಭೂತ ಸೌಕರ್ಯಗಳು ಅತ್ಯಗತ್ಯವಾಗಿದ್ದು ಅದನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಳ್ಳಲಾಗಿದ್ದು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಸದಸ್ಯೆ ಶ್ರೀಮತಿ ಜಯಶ್ರೀ ಜೆ.ಕುಡ್ವ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಅಧ್ಯಕ್ಷರಾದ ಸಾಯಿ ರಾಮ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರ್, ಮಾಧವ ಸುವರ್ಣ, ಶೇಖರ್ ಪೂಜಾರಿ, ಊರ್ಮಿಳಾ ರಮೇಶ್ ಕುಮಾರ್, ಮಾಜಿ ಮನಪ ಸದಸ್ಯರಾದ ರಾಜೇಂದ್ರ ಕುಮಾರ್, ರಾಧಾಕೃಷ್ಣ, ಪಕ್ಷದ ಹಿರಿಯರಾದ ದಿನ್ಕರ್ ಶೆಟ್ಟಿ, ರಮೇಶ್ ಪಟಾಲ್, ನರಹರಿ ಪ್ರಭು, ಜನಾರ್ಧನ ಕುಡ್ವ, ಪುಷ್ಪ ಶೆಟ್ಟಿ, ತ್ರಿವಿಕ್ರಂ ಪ್ರಭು, ಪ್ರವೀಣ್ ಕುದ್ರೋಳಿ, ಗೋಪಾಲ್ ಶೇಟ್, ಶರತ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಸುನಿಲ್, ದೇವಾನಂದ ಶೆಣೈ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.