Sunday, January 19, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹೃದಯಾಘಾತದಿಂದ ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಖ್ಯಾತ ಇಂಜಿನಿಯರ್ ಗೋಪಿನಾಥ ಶೆಟ್ಟಿ ನಿಧನ – ಕಹಳೆ ನ್ಯೂಸ್ 

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.

1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ ಪುತ್ತೂರು ನಗರ ಸಹ ಸಂಘ ಚಾಲಕ್ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದರು. ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪುತ್ತೂರು ಭಾಗದ ಮೇಲುಸ್ತುವಾರಿಯಾಗಿದ್ದ ಅವರು ಈ ಭಾಗದಲ್ಲಿ ಹತ್ತು ಹಲವು ಜನೌಷಧಿ ಕೇಂದ್ರಗಳ ಆರಂಭಕ್ಕೆ ಕಾರಣಿಭೂತರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ ದೇವಸ್ಥಾನದ ಬಳಿ ನಂದಿಲದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅಪಾರ ಶಿಷ್ಯವರ್ಗ, ಬಂಧು ಮಿತ್ರರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು