Saturday, April 5, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಮನೆಯಲ್ಲಿ ಯಾರು ಇಲ್ಲದ ವೇಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬಳಿಕ ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಇದೀಗ ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ