Sunday, January 19, 2025
ಸುದ್ದಿ

ಪುತ್ತೂರು ; ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕರಾದ ವೆಂಕಟೇಶ್ ಪ್ರಸಾದ್ ಇವರಿಗೆ ದಕ್ಷಿಣ ಭಾರತ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ – ಕಹಳೆ ನ್ಯೂಸ್

ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಮಾರ್ಚ್ 9 ಮತ್ತು 10 ರಂದು ನಡೆದ 2ನೇ ದಕ್ಷಿಣ ಭಾರತ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ಶ್ರೀ ವೆಂಕಟೇಶ್ ಪ್ರಸಾದ್ (ದಿ.ರಾಮಚಂದ್ರ ಭಟ್ ಮತ್ತು ಶ್ರೀಮತಿ ಸರಸ್ವತಿ ಭಟ್ ದಂಪತಿಗಳ ಪುತ್ರ) ಇವರು 45ರ ವಯೋಮಾನದ 110 ಮೀ ಹರ್ಡಲ್ಸ್ ನಲ್ಲಿ ಪ್ರಥಮ , ಹೈಜಂಪ್, 4×100 ಮೀ ರಿಲೇ ಹಾಗೂ 4×100 ಮೀ ರಿಲೇಗಳಲ್ಲಿ ಚತುರ್ಥ ಸ್ಥಾನ ಗಳಿಸಿದ್ದಾರೆ. ಪ್ರಸ್ತುತ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕ್ರೀಡಾಕೂಟದಲ್ಲಿ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪಾಂಡಿಚೇರಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಗಳ ಸುಮಾರು 770ಕ್ಕೂ ಅಧಿಕ ಹಿರಿಯ ಕ್ರೀಡಾಪಟುಗಳು ಭಾಗವಹಿದ್ದರು.