Sunday, January 19, 2025
ಸುದ್ದಿ

55 ಲಕ್ಷ ರೂಪಾಯಿ ಅನುದಾನದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರ ರಸ್ತೆ ಕಾಂಗ್ರಿಟಿಕರಣಕ್ಕೆ 25 ಲಕ್ಷ ಹಾಗೂ ಗರಡಿ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ನೊವೆಲ್ ವಾಸ್, ಸುನೀತಾ ಶೆಟ್ಟಿಗಾರ್ ಹಾಗೂ ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಉಪೇಂದ್ರ ನಾಯಕ್, ಸಂದೀಪ್ ಶೆಟ್ಟಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.