Sunday, January 19, 2025
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು.


ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ ವೃಂದ, ಕಾಲೇಜು ಅಭಿವೃದ್ಧಿ ಸಮಿತಿಯ ಪ್ರಕಾಶ್ ರಾವ್, ಸುಧಾ, ರಣದೀಪ್ ಕಾಂಚನ್,ಶಿತೇಶ್ ಕೊಂಡೆ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು