Sunday, January 19, 2025
ಪುತ್ತೂರುಸುದ್ದಿ

ಪುತ್ತೂರು : ಸಂಟ್ಯಾರಿನಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಪುತ್ತೂರು : ಸಂಟ್ಯಾರು ಎಂಬಲ್ಲಿ ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಾ.14ರಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಕುಂಬ್ರದಿoದ ಪುತ್ತೂರಿಗೆ ಸಂಟ್ಯಾರು ಮಾರ್ಗವಾಗಿ ಸಾಗುತ್ತಿದ್ದ ಇನ್ನೋವಾ ಹಾಗೂ ಪುತ್ತೂರಿನಿಂದ ಕುಂಬ್ರ ಕಡೆಗೆ ಸಾಗುತ್ತಿದ್ದ ಫೋರ್ಡ್ ಕಾರು ನಡುವೆ ಡಿಕ್ಕಿ ಸಂಭವಿಸಿದೆ.ಫೋರ್ಡ್ ಕಾರಿನ ಟಯರ್ ಸಿಡಿದ ಪರಿಣಾಮ ಈ ಅಪಘಾತ ಸಂಭವಿಸದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೋರ್ಡ್ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಸ್ತೆ ಮದ್ಯದಲ್ಲಿ ಈ ಅಪಘಾತ ಸಂಭವಿಸಿದ ಕಾರಣ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಟ್ರಾಫಿಕ್ ಜಾಮ್ ಸಂಭವಿಸಿದೆ.

ಸ್ಥಳಕ್ಕೆ ಗ್ರಾಮಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.