Sunday, January 19, 2025
ಸುದ್ದಿ

ವಾರಾಹಿ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆ ಒಪ್ಪಿಗೆ : ಯಶ್ ಪಾಲ್ ಸುವರ್ಣ – ಕಹಳೆ ನ್ಯೂಸ್

ಉಡುಪಿ : ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಸಂಬAಧಿಸಿದ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯಿಂದ ತಾಂತ್ರಿಕ ಅನುಮತಿ ನೀಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ, ಉಡುಪಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯಾಗಿರುವ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ತಕ್ಷಣ ಅನುಮತಿ ನೀಡುವಂತೆ ಕೋರಿದರು. ಈ ಯೋಜನೆಯಿಂದ ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲಿದೆ ಎಂದರು.

ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಮ್ಮತಿ ಸೂಚಿಸಿ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.