Saturday, November 23, 2024
ಸುದ್ದಿ

ಶಿಷ್ಯವೇತನ ಪಾವತಿಯಾಗಿಲ್ಲ ಎಂದು ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಸೌಲಭ್ಯ ಪಡೆಯುತ್ತಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸರಕಾರಿ ಕೋಟಾದ ಗೃಹವೈದ್ಯರು ಮತ್ತು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ 8 ತಿಂಗಳಿನಿಂದ ಶಿಷ್ಯವೇತನ ಪಾವತಿಯಾಗಿಲ್ಲ ಎಂದು ಆಗ್ರಹಿಸಿ ಇಂದು ವೈದ್ಯ ವಿದ್ಯಾರ್ಥಿಗಳು ಇಂದು ನಗರದ ವೆನ್ಲಾಕ್ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ವೈದ್ಯ ವಿದ್ಯಾರ್ಥಿಗಳು, ದಿನದ 24 ಗಂಟೆಗಳ ಕಾಲ ದುಡಿಯುತ್ತೇವೆ. ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂಬ ಭೀತಿಯಿದೆ, ಆದರೂ ನಾವು ಎಲ್ಲಾ ರೀತಿಯಲ್ಲಿ ರೋಗಿಗಳ ಶುಶ್ರೂಷೆಯನ್ನು ಮಾಡುತ್ತಿದ್ದೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಕಂಪಲ್ಸರಿ ಲೊಟೇಟಿಂಗ್ ಇಂಟರ್ವೀಸ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನಿಗದಿಪಡಿಸಿ, ಆದೇಶ ಹೊರಡಿಸಿತ್ತು. ಆದರೆ ನಮಗೆ 8 ತಿಂಗಳಿನಿಂದ ಯಾವುದೇ ಶಿಷ್ಯವೇತನ ಬಂದಿಲ್ಲ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ಮುಖ್ಯಮಂತ್ರಿ ಕುಮಾರಸ್ವಾಮಿ, ಆರೋಗ್ಯ ಸಚಿವರು ಹಾಗೂ ಶಿಕ್ಷಣ ಸಚಿವರಲ್ಲಿ ಮಾತನಾಡಿದರೂ, ನಮ್ಮ ಮನವಿಗೆ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ ಎಂದು ವೈದ್ಯ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡರು.