Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಂಗ್ರೆಸ್ ಮರಿರೌಡಿಗಳ ಅಟ್ಟಹಾಸಕ್ಕೆ ಉತ್ತರಿಸಲು ನಾವು ಸಿದ್ದರಿದ್ದೇವೆ ; ಪುತ್ತೂರು‌ ಕಾಂಗ್ರೆಸ್ ಶಾಸಕರ ಬೆಂಬಲಿಗರ ಗೂಂಡಾ ವರ್ತನೆ ಘಟನೆಗೆ ಬ್ರಿಜೇಶ್ ಚೌಟ ಆಕ್ರೋಶ – ಕಹಳೆ ನ್ಯೂಸ್

ಕಾಂಗ್ರೆಸ್ ನ ಗೂಂಡಾಗಿರಿ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ- ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು :  ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾನು 1400 ಕೋಟಿಯ ಅನುದಾನ ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಆ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ…? ಅನುದಾನದ ಬಗೆಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ ಗೂಂಡ ಕಾರ್ಯಕರ್ತರ ಮೂಲಕ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ.

ಕಾಂಗ್ರೆಸ್ ಸರಕಾರ ಬಂದ ನಂತರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ರೀತಿಯ ಘಟನೆಗಳಿಗೆ ಅವಕಾಶಗಳನ್ನು ನೀಡಬಾರದು, ಸದರಿ ಪ್ರಕರಣವನ್ನು ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ.