ಬಿಜೈ ಕಾಪಿಕಾಡ್ ನ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ಬಿಜೈ ಕಾಪಿಕಾಡ್ ನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಎರಡು ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿ ಶಾಲೆಗೆ ಹತ್ತಾಂತರಿಸಿದರು.
ನಂತರ ಮಾತನಾಡಿದ ಶಾಸಕರು, 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಸೇರಿದಂತೆ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಕಾಮಗಾರಿ ಆರಂಭಿಸಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು ಕೊಠಡಿಗಳನ್ನು ಶಾಲೆಗೆ ಹಸ್ತಾಂತರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು