Recent Posts

Sunday, January 19, 2025
ರಾಜಕೀಯಶಿವಮೊಗ್ಗಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನಲೆ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಅತೀ ಹೆಚ್ಚು ಮತಗಳಿಂದ ವಿಜಯಗೊಳಿಸಲು ನರೇಂದ್ರ ಮೋದಿ ಕರೆ – ಕಹಳೆ ನ್ಯೂಸ್

ಶಿವಮೊಗ್ಗ: ಈಗಾಗಲೇ ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚುತ್ತಿದ್ದು ಮತದಾನದ ದಿನಾಂಕ ಕೂಡ ಘೋಷಣೆಯಾಗಿದೆ, ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭರ್ಜರಿ ಪ್ರಚಾರ ಕಾರ್ಯವನ್ನು ಆರಂಭಿಸಿದೆ.

ನಿನ್ನೆ ಶಿವಮೊಗ್ಗದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡದ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಭಾರಿ ಮತಗಳಿಂದ ವಿಜಯಗೊಳಿಸಬೇಕು ಎಂದು ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಕೇಳಲು ಶಿವಮೊಗ್ಗದಲ್ಲಿ ಜನ ಸಾಗರವೇ ಸೇರಿದ್ದರು. ಸಭೆಯಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಬಿ ಎಸ್ ಯೆಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಲೊಕಸಭಾ ಚುನಾವಣೆಯ ಅಭ್ಯರ್ಥಿಗಳಾದ ಬಿ ವೈ ರಾಘವೇಂದ್ರ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಡಾಕ್ಟರ್ ಮಂಜುನಾಥ್ ಹೀಗೆ ಹಲವು ಮುಖಂಡರುಗಳು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು