Sunday, January 19, 2025
ರಾಜಕೀಯಸುದ್ದಿ

ದಕ್ಷಿಣದತ್ತ ಗಮನ ಹರಿಸಿದ ಪ್ರಧಾನಿ ಮೋದಿ : ಇಂದು ಕೇರಳ, ತಮಿಳುನಾಡಿನಲ್ಲಿ ‘ಮೋದಿ’ ಅಬ್ಬರದ ಪ್ರಚಾರ-ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳಿಗೆ ಬೆಂಬಲವನ್ನು ಗಳಿಸುವ ಪ್ರಯತ್ನಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳ ಮತ್ತು ತಮಿಳುನಾಡಿನಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ಬೆಳಿಗ್ಗೆ ಕೇರಳದ ಪಾಲಕ್ಕಾಡ್ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ ಕೊಟ್ಟಮೈದಾನ್ ಅಂಚುವಿಳಕ್ಕು ನಿಂದ ಪ್ರಾರಂಭವಾಗಲಿದ್ದು, ಪಟ್ಟಣದ ಮುಖ್ಯ ಅಂಚೆ ಕಚೇರಿಯತ್ತ ಸಾಗಲಿದೆ. ಮೋದಿ ರೋಡ್ ಶೋಗೂ ಮುನ್ನ ಬಿಜೆಪಿ ಇಂದು ಸಂಜೆ ಪಟ್ಟಣದಲ್ಲಿ ಬೈಕ್ ರ್ಯಾಲಿ ಆಯೋಜಿಸಿದೆ.
ತಮಿಳುನಾಡಿನಲ್ಲಿ ಪ್ರಧಾನಿ ಮೋದಿ
ಪ್ರಧಾನಿ ಮೋದಿಯವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೀಟು ಹಂಚಿಕೆ ಒಪ್ಪಂದಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮತ್ತು ಪಿಎಂಕೆ ಅಧ್ಯಕ್ಷರು ಮಂಗಳವಾರ ಬೆಳಿಗ್ಗೆ ಪಿಎಂಕೆ ಸಂಸ್ಥಾಪಕ ರಾಮದಾಸ್ ಅವರ ಮನೆಯಲ್ಲಿ ಸಭೆ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.
2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು