Recent Posts

Sunday, January 19, 2025
ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆಯ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು :  ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗಗಳು, ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಇನ್ಸ್ಟಿಟ್ಯೂಶನ್ಸ್‌ಇನ್ನೊವೇಶನ್‌ ಕೌನ್ಸಿಲ್‌ಗಳ ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ಸಂಘದ ಚಟುವಟಿಕೆಗಳ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮನ್ನುಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ|ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪಸ್‌ ನಿರ್ದೇಶಕರಾದವಂ| ಸ್ಟ್ಯಾನಿ ಪಿಂಟೋರವರು ಮುಖ್ಯ ಅತಿಥಿಯಾಗಿಯೂ, ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಬೆಂಗಳೂರಿನ ಸಿಎಸ್‌ಐಆರ್-ನ್ಯಾಷನಲ್ಏರೋಸ್ಪೇಸ್ ಲ್ಯಾಬೋರೇಟರೀಸ್‌ನ ಮೆಟೀರಿಯಲ್ ಸೈನ್ಸ್ ವಿಭಾಗದ ವಿಶ್ರಾಂತ ವಿಜ್ಞಾನಿ ಡಾ| ಆರ್. ರಾಮಚಂದ್ರ ರಾವ್ ಗೌರವ ಅತಿಥಿಯಾಗಿಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅತಿಥಿಗಳು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಕ್ಯಾಂಪಸ್ ನಿರ್ದೇಶಕರಾದ ವಂ|ಸ್ಟಾನಿಪಿಂಟೋ ಅವರು ವಿದ್ಯಾರ್ಥಿಗಳಿಗೆ ವಿಜ್ಞಾನ ಕ್ಷೇತ್ರದಲ್ಲಿನ ವಿಶಾಲ ಅವಕಾಶಗಳ ಬಗ್ಗೆ ತಿಳಿಹೇಳಿದರು, ಅವರಭವಿಷ್ಯಕ್ಕಾಗಿ ಅದರ ಮಹತ್ವವನ್ನು ಒತ್ತಿ ಹೇಳಿದರು.ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವೈಜ್ಞಾನಿಕಮನೋಧರ್ಮವನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ಒತ್ತಿಹೇಳಿದರು, ವಿದ್ಯಾರ್ಥಿಗಳು ಆಸಕ್ತಿ ಮತ್ತು ಸಮರ್ಪಣಾ ಮನೋಭಾವದಿಂದವಿಷಯವನ್ನು ಅಧ್ಯಯನ ಮಾಡಲು ಮತ್ತು ಆ ಮೂಲಕ ಸದುಪಯೋಗಪಡಿಸಿಕೊಳ್ಳಲು ಪ್ರೋತ್ಸಾಹಿಸಿದರು. ಅವರು ತಮ್ಮ ಸುತ್ತಲಿನ ಪ್ರಪಂಚಕ್ಕೆಜ್ಞಾನ ಮತ್ತು ಸೂಕ್ಷ್ಮತೆಯ ಪರಿಣಾಮಕಾರಿ ಸಂವಹನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ ಡಾ| ಆರ್.ರಾಮಚಂದ್ರ ರಾವ್ ಅವರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡು, ಕಾಲೇಜಿಲ್ಲಿ ಅವರಿಗೆ ದೊರಕಿದ ಉತ್ತಮ ಮಾರ್ಗದರ್ಶನಕ್ಕಾಗಿಪ್ರಶಂಸೆಯ ಮಾತುಗಳನ್ನಾಡಿದರು ಮತ್ತು ವಿದ್ಯಾರ್ಥಿಗಳನ್ನು ವೈಜ್ಞಾನಿಕ ಬರವಣಿಗೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದರು. ವಿಜ್ಞಾನ ವೇದಿಕೆಯಕಾರ್ಯಚಟುವಟಿಕೆಗಳಿಗೆ ಶುಭಕೋರುತ್ತಾ ಅವರು ‘ಅಡ್ವಾನ್ಸ್ಡ್ ಸೆರಾಮಿಕ್ಸ್ ಫಾರ್ ಮಲ್ಟಿಡೈಮೆನ್ಷನಲ್ ಅಪ್ಲಿಕೇಷನ್ಸ್: ಫ್ರಮ್ ಸೈನ್ಸ್ ಟು
ಟೆಕ್ನಾಲಜಿ’ ಕುರಿತು ಉಪನ್ಯಾಸ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಲ್ಪಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ವಿಜ್ಞಾನ ವೇದಿಕೆ ಅಧ್ಯಕ್ಷ ವಿನೀತ್‌ ಲೋಬೋ ಸ್ವಾಗತಿಸಿದರು, ಉಪಾಧ್ಯಕ್ಷರಾದ ಅಂಜುಂ ನಿಹಾಲವಂದಿಸಿದರು. ವಿಜ್ಞಾನ ವೇದಿಕೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭವನ್ನು ವಿಜ್ಞಾನ ವಿಭಾಗದ ಡೀನ್ ಡಾ| ಮಾಲಿನಿ ಕೆ.ನಡೆಸಿಕೊಟ್ಟರು. ಸಮೀಯಾ ಬಾನು ಕಾರ್ಯಕ್ರಮದ ನಿರೂಪಣೆ ಮಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರುಗಳಾದ ಡಾ| ಪಿ ಎಸ್‌ ಕೃಷ್ಣಕುಮಾರ್‌ ಹಾಗೂ ಡಾ| ವಿಜಯ ಕುಮಾರ್‌ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.