Sunday, January 19, 2025
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕೋದಾಗಿ ಹೇಳಿ ಮಹಿಳೆಗೆ ಬೆದರಿಕೆ –ಕಹಳೆ ನ್ಯೂಸ್

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕೋದಾಗಿ ಹೇಳಿ ಮಹಿಳೆಗೆ ಬೆದರಿಕೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿದೆ. ಈಕೆ ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದು, 2022 ನೇ ವರ್ಷದಲ್ಲಿ ಈಕೆಗೆ ಮೇಟ್ರಿಮೋನಿಯೊಂದರ ಮೂಲಕ ಆರೋಪಿ ಪ್ರಶಾಂತ್ ಕೋಟ್ಯಾನ್ ಉಡುಪಿ ಎಂಬಾತನ ಪರಿಚಯವಾಗಿ ಮದುವೆಯಾಗಲು ತೀರ್ಮಾನಿಸಿದ್ದರು. ಆರೋಪಿಯ ಪೂರ್ವಾಪರವನ್ನು ಮಹಿಳೆಯ ಮನೆಯವರು ವಿಚಾರಿಸಿದಾಗ ಉತ್ತಮ ಅಭಿಪ್ರಾಯ ಕಂಡುಬಾರದ ಹಿನ್ನೆಲೆಯಲ್ಲಿ, ಮಹಿಳೆ ಮತ್ತು ಮನೆಯವರು ಆರೋಪಿಯನ್ನು ನಿರಾಕರಿಸಿದ್ದಾರೆ. ಇದರಿಂದ ಅಸಮಧಾನಗೊಂಡ ಆರೋಪಿಯು ಮಹಿಳೆಗೆ ಕರೆಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ಫೋಟೋ ಗಳನ್ನು ಹಾಕುವುದಾಗಿ ಹಾಗೂ ಕೊಲೆ ಮಾಡುವುದಾಗಿ ಜೀವಬೆದರಿಕೆ ಒಡ್ಡಿರುತ್ತಾನೆ. ಈ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲಂ: 354(ಆ),506 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು