Saturday, November 23, 2024
ಸುದ್ದಿ

ಪಟಾಕಿ ಸಿಡಿಸುವುದಕ್ಕೆ ಅಸ್ತು ಎಂದ ಸುಪ್ರೀಂ ಕೋರ್ಟ್ – ಕಹಳೆ ನ್ಯೂಸ್

ದೆಹಲಿ: ವೈಭವದ ದಸರಾ ಕಳೆದಾಯ್ತು ಇನ್ನು ಬರೋದು ದೀಪಗಳ ಹಬ್ಬ ದೀಪಾವಳಿ. ದೀಪಾವಳಿ ಸಮಯದಲ್ಲಿ ದೇಶದಾದ್ಯಂತ ಪಟಾಕಿ ತಯಾರಿಕೆ ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ದೀಪಾವಳಿ ಹಬ್ಬದಲ್ಲಿ ದೇಶದಾದ್ಯಂತ ರಾತ್ರಿ 8 ರಿಂದ 10 ಗಂಟೆಯ ಮಧ್ಯೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಅದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪಟಾಕಿ ತಯಾರಿಕೆ ಮತ್ತು ಸಿಡಿಸುವುದನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸುವುದು ಸಾಧ್ಯವಿಲ್ಲ. ಸಂವಿಧಾನದ 21 ನೇ ವಿಧಿಯು ಪ್ರತಿ ವ್ಯಕ್ತಿಗೂ ಜೀವಿಸುವ ಹಕ್ಕನ್ನು ನೀಡಿದೆ.

ಪಟಾಕಿ ಸಿಡಿಸುವುದರಿಂದ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಆಗುವ ಪರಿಣಾಮಗಳು ಮತ್ತು ಪಟಾಕಿ ತಯಾರಕರು, ಮಾರಾಟಗಾರರ ಜೀವನೋಪಾಯವನ್ನೂ ಗಮನದಲ್ಲಿರಿಸಿಕೊಂಡು ಈ ತೀರ್ಮಾನಕ್ಕೆ ಬಂದಿದ್ದೇವೆ. ಇದೊಂದು ಸಮತೋಲಿತ ಆದೇಶ’ ಎಂದು ಪೀಠವು ಅಭಿಪ್ರಾಯಪಟ್ಟಿದೆ.