Tuesday, January 21, 2025
ಸುದ್ದಿ

ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ(ತಿದ್ದುಪಡಿ) ವಿಧೇಯಕ 2024 ರದ್ದುಗೊಳಿಸಿ ! ; ಕರ್ನಾಟಕ ದೇವಸ್ಥಾನ ಮಹಾಸಂಘದಿದ ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್ ಮೂಲಕ ರಾಜ್ಯ ಪಾಲರಿಗೆ ಮನವಿ

ಮಂಗಳೂರು : ಕರ್ನಾಟಕ ಸರಕಾರವು ದಿನಾಂಕ 20 ಫೆಬ್ರವರಿಯಂದು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಆಧಿನಿಯಮ 1997 ಗೆ ಮತ್ತಷ್ಟು ತಿದ್ದುಪಡಿಯನ್ನು ಮಾಡಿದೆ. ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳು ಇದ್ದು, ಅವುಗಳು ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ದೇವಸ್ಥಾನ ಮಹಾಸಂಘದಿAದ ಮಾರ್ಚ್ 19 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯಲ್ಲಿ ಮನವಿಯನ್ನು ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಲಂ 69 ಇ ನಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳೂ ಸಹ ದೇವಸ್ಥಾನ ಸಮಿತಿಯ ಸದಸ್ಯರಾಗಬಹುದು ಎಂಬ ನಿಯಮ ಮಾಡಲಾಗಿದೆ. ಇದರಲ್ಲಿ ಹಿಂದೂಗಳಲ್ಲದವರು ಸೇರುವ ಸಾಧ್ಯತೆ ಇರುವ ಕಾರಣ ಈ ನಿಯಮ ಅತ್ಯಂತ ಅಪಾಯಕಾರಿಯಾಗಿದೆ ಮತ್ತು ಅಲ್ಲಿಯೂ ಭ್ರಷ್ಟಚಾರ ನಡೆಯುವ ಸಾಧ್ಯತೆ ಇದೆ. ಜೊತೆಗೆ ಕಲಂ 19 ರಲ್ಲಿ ಸಾಮಾನ್ಯ ಸಂಗ್ರಹಣ ನಿಧಿಯ ಉಲ್ಲೇಖ ಮಾಡಲಾಗಿದ್ದು ನಿಧಿಯನ್ನು ಇತರ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ನೀಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನ್ಯಮತೀಯರಿಗೂ ಅನ್ವಯ ಮಾಡುವ ಸಾದ್ಯತೆ ಇದೆ. ಹಾಗಾಗಿ ಮುಂದಿನ ದಿನಗಳಲ್ಲಿ ದೇವಾಲಯದ ನಿಧಿ ಅನ್ಯ ಸಮುದಾಯದವರ ಪಾಲಗಬಹುದು. ಇನ್ನು ಕಲಂ 25 ರಲ್ಲಿ ಸಂಯೋಜಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ರಚನೆ ಸಂದರ್ಭದಲ್ಲಿ ಹಿಂದೂಗಳಲ್ಲದವರನ್ನು ನೇಮಕ ಮಾಡುವ ಬಗ್ಗೆಉಲ್ಲೇಖ ಮಾಡಲಾಗಿದೆ.ಇದು ದೇವಸ್ಥಾನಗಳ ಪರಂಪರೆ ರಕ್ಷಣೆಯ ವಿಷಯದಲ್ಲಿ ಅತ್ಯಂತ ಅಪಾಯಕಾರಿಯಾಗಿದೆ ಎಂದರು. ಈ ಎಲ್ಲ ಕಲಂಗಳು ದೇವಸ್ಥಾನಗಳ ಸಂರಕ್ಷಣೆ ದೃಷ್ಟಿಯಿಂದ ಅತ್ಯಂತ ಮಾರಕವಿರುವುದರಿಂದ ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಈ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಜಿಲ್ಲಾಡಳಿತದ ಮೂಲಕ ರಾಜ್ಯ ಪಾಲರಿಗೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಶ್ರೀ ಚಂದ್ರಕಾAತ ಕಾಮತ್, ಡಾ. ಪ್ರಣವ್ ಮಲ್ಯ, ಡಾ. ಮುರುಳಿಧರ ಭಟ್ ನ್ಯಾಯವಾದಿಗಳಾದ ಶ್ರೀ ತೀರ್ಥೇಶ ಹಾಗೂ ಹಿಂದೂ ಜನ ಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶ್ರೀ ವಿಜಯಕುಮಾರ್, ಸೌ.ಪವಿತ್ರ ಕುಡ್ವ ಹಾಗೂ ಶ್ರೀ ಉಪೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಶ್ರೀ. ವಿಜಯಕುಮಾರ್
ಸಮನ್ವಯಕರು,
ಹಿಂದೂ ಜನಜಾಗೃತಿ ಸಮಿತಿ.
8296846386