Tuesday, January 21, 2025
ಸುದ್ದಿ

ಅಕ್ರಮ ಮರಳು ಸಾಗಾಟ ಪ್ರಕರಣ ; ನಾಲ್ವರನ್ನು ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.


ಕನ್ಯಾನ ನಿವಾಸಿ ಅಬ್ದುಲ್ ರಹಮಾನ,ಅರ್ಕುಳ ನಿವಾಸಿ ಮಹಮ್ಮದ್ ಸಾದಿಕ್ , ಕಂಬಳಬೆಟ್ಟು ನಿವಾಸಿ ಗೌತಮ್, ಕೆಲಿಂಜ ನಿವಾಸಿ ಗುಡ್ಡಪ್ಪ ಗೌಡ
ಎಂಬವರು ಆರೋಪಿಗಳಾಗಿದ್ದು,ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ನೇತ್ರಾವತಿ ನದಿಯಿಂದ ಪರವಾನಿಗೆಯಿಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು